ಸಾಧನೆಗೆ ಅಗತ್ಯ ನಿರಂತರ ಪ್ರಯತ್ನ : ಪೂರಣ್ ವರ್ಮ ಕಿವಿಮಾತು

New Project (9)
Published on

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಶ್ರುತ ಅಕಾಡೆಮಿ ಮಂಗಳೂರು ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕೆ-ಸಿ.ಇ.ಟಿ. ಮಾಹಿತಿ ಕಾರ್ಯಾಗಾರ ನಡೆಯಿತು.

ಎಸ್‌ಡಿಎಂ ಎಜುಕೇಶನಲ್ ಸೊಸೈಟಿಯ ಐಟಿ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ ಉದ್ಘಾಟಿಸಿ ಮಾತನಾಡಿ, ಸಾಧನೆಗೆ ನಿರಂತರ ಪ್ರಯತ್ನ ಅಗತ್ಯ. ದಿನನಿತ್ಯದ ಅಭ್ಯಾಸದಿಂದ ಉತ್ತಮ ಜ್ಞಾನ, ಅಂಕ ಪಡೆಯಲು ಹಾಗೂ ವಿಶೇಷ ಸಾಧನೆ ಮಾಡಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟು ಹಂಚಿಕೆ ವಿಭಾಗದ ಮುಖ್ಯಸ್ಥ ಉಮೇಶ್ ಗೌಡ ಮಾರ್ಗದರ್ಶನ ನೀಡಿದರು. ಉಮೇಶ್ ಗೌಡ ಅವರನ್ನು ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ಮತ್ತು ಶ್ರುತ ಅಕಾಡೆಮಿ ಪರವಾಗಿ ಗೌರವಿಸಲಾಯಿತು.

ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ, ಉಪಪ್ರಾಚಾರ್ಯ ಡಾ.ರಾಜೇಶ್ ಬಿ, ಎಸ್. ಡಿ.ಎಂ. ಸನಿವಾಸ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುನೀಲ್ ಪಂಡಿತ್, ವಾಣಿ ಪದವಿಪೂರ್ವ ಕಾಲೇಜಿನ ವಿಭಾಗ ಮುಖ್ಯಸ್ಥ ಹರ್ಷಿತ್ ಶೆಟ್ಟಿ, ಶ್ರುತ ಅಕಾಡೆಮಿ ಮುಖ್ಯಸ್ಥ ಡಾ.ಶೃತಕೀರ್ತಿರಾಜ ಉಪಸ್ಥಿತರಿದ್ದರು.

ವಾಣಿ ಪದವಿಪೂರ್ವ ಕಾಲೇಜು, ಉಜಿರೆಯ ಎಸ್.ಡಿ.ಎಂ. ಸನಿವಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ 700ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು. ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ಮುಖ್ಯಸ್ಥೆ ಅನಿತಾ ಕೆ.ಪಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net