ಮುಡಾ ಗದ್ದುಗೆ ಹಿಡಿದ ಕೆ.ಮರೀಗೌಡ

muda mysore
Published on

ಮೈಸೂರು: ರಾಜ್ಯ ಸರ್ಕಾರ ಎರಡನೇ ಪಟ್ಟಿಯಲ್ಲಿ 44 ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಭಾವಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ತವರು ಜಿಲ್ಲೆ, ರಾಜ್ಯ ರಾಜಕೀಯ ಶಕ್ತಿ ಕೇಂದ್ರ ಎಂದೇ ಬಿಂಬಿತವಾದ ಮೈಸೂರು ಜಿಲ್ಲೆಯಲ್ಲಿ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ತೀವ್ರ ಪೈಪೋಟಿಯ ನಡುವೆಯೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗದ್ದುಗೆ ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರಿಗೆ ದೊರೆತಿದೆ. ಮಾಜಿ ಮೇಯರ್ ಅಯೂಬ್ ಖಾನ್ ಅವರನ್ನು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾಡಾ ಅಧ್ಯಕ್ಷರನ್ನಾಗಿ ಚಾಮರಾಜನಗರದ ಮರಿಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net