ಕೆ.ಪಿ.ರಾಜು ಕರವೇ ಜಿಲ್ಲಾಧ್ಯಕ್ಷ

karave
Published on

ಕುಶಾಲನಗರ: ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಬಣದ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಕೂಡಿಗೆ ಹೆಗ್ಗಡಹಳ್ಳಿ ಗ್ರಾಮದ ಕೆ.ಪಿ.ರಾಜು ಅವರು ಆಯ್ಕೆಯಾಗಿದ್ದಾರೆ.

ನೂತನವಾಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೂಡಿಗೆ ಹೆಗ್ಗಡಹಳ್ಳಿ ಗ್ರಾಮದ ಕೆ.ಪಿ.ರಾಜು ಅವರು ಕನ್ನಡಪರ ಮತ್ತು ಜನಪರ ಚಿಂತಕರಾಗಿದ್ದಾರೆ. ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಘಟಕವನ್ನು ಬಲಪಡಿಸಲು ಆಸಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರವರು ಬೆಂಗಳೂರಿನ ಗಾಂಧಿನಗರದಲ್ಲಿರುವ ಕಚೇರಿಯಲ್ಲಿ ಆದೇಶ ಪತ್ರವನ್ನು ನೀಡಿದರು. ಕಾವೇರಿ ಮಾತೆಯ ಉಗಮ ಸ್ಥಳವಾಗಿರುವ ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಘಟಕವನ್ನು ಬಲಪಡಿಸಲು ಶಕ್ತಿಮೀರಿ ಕೆಲಸ ನಿರ್ವಹಿಸಬೇಕು ಎಂದು ಟಿ.ಎ.ನಾರಾಯಣಗೌಡ ಅವರು ಆದೇಶ ಪತ್ರವನ್ನು ನೀಡಿದ್ದಾರೆ.

ಆದೇಶ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ಕೆ.ಪಿ.ರಾಜು ಮಾತನಾಡಿ, ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಆಶೀರ್ವಾದದಿಂದ ನನ್ನನ್ನು ಕೊಡಗು ಜಿಲ್ಲಾಧ್ಯಕ್ಷನಾಗಿ ಆಯ್ಕೆ ಮಾಡಿದ ಪ್ರತಿಯೊಬ್ಬ ಕರ್ನಾಟಕ ರಕ್ಷಣಾ ವೇದಿಕೆಯ ಎಲ್ಲಾ ಸರ್ವ ಸದಸ್ಯರಿಗೆ ಹಾಗೂ ನನಗೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ನಡೆಸಲಾಗುವುದು. ಅಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಕೂಡಿಗೆ ಹಾಗೂ ಕೂಡುಮಂಗಳೂರು ಭಾಗದಿಂದ ಕರ್ನಾಟಕ ರಕ್ಷಣಾ ವೇದಿಕೆಯನ್ನು ಬಲಪಡಿಸಲು ಇಪ್ಪತ್ತಕ್ಕೂ ಹೆಚ್ಚು ಯುವಕರು ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ಕೊಡಗು ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುದುಪಜೆ, ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ, ಕುಶಾಲನಗರ ತಾಲೂಕು ಮಹಿಳಾ ಅಧ್ಯಕ್ಷೆ ರೂಪ ಮತ್ತು ಪ್ರಮುಖರಾದ ಶಿವಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ಕೂಡಿಗೆ ಅನಂತು, ಗ್ರಾಮ ಪಂಚಾಯತಿ ಸದಸ್ಯರು, ರೈತ ಮುಖಂಡರಾದ ಕೆ.ಸಿ.ರಾಮು ಹಾಗೂ ಅರುಣ್ ಮಾದಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net