ಕೆ.ಪದ್ಮನಾಭ ರೈ ಅಧ್ಯಕ್ಷರಾಗಿ ಆಯ್ಕೆ : ಕರ್ನಾಟಕ ಪ್ರದೇಶ ಕೃಷಿಕ ಸಮಾಜ

New Project (25)
Published on

ಬಂಟ್ವಾಳ: ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರಾಗಿ ಕೆ.ಪದ್ಮನಾಭ ರೈ ಪುನರಾಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯ ಕೃಷಿಕ ಸಮಾಜದ ಪ್ರತಿನಿಧಿಗಳ ಆಯ್ಕೆ ಸಂಬಂಧ ಚುನಾವಣೆಯಲ್ಲಿ ಬಂಟ್ವಾಳ ತಾಲೂಕು ಕೃಷಿಕ ಸಮಾಜದಿಂದ ಆಯ್ಕೆಯಾದ ಪದ್ಮನಾಭ ರೈ ಅವರು ರಾಜ್ಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದರು. ಅವರು ಬಂಟ್ವಾಳ ತಾಪಂ, ಎಪಿಎಂಸಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ತಾಲೂಕು ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ನೆಟ್ಲ ಶ್ರೀ ಸದಾಶಿವ ದೇವಸ್ಥಾನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net