ಉಳ್ಳಾಲದ ಕೆ. ಪಾಂಡ್ಯರಾಜ ಪಪೂ ಕಾಲೇಜು ಫುಟ್ಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

mng- oct 5- k.panyaraja college
ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಪದವಿ ಪೂರ್ವ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಉಳ್ಳಾಲದ ಕೆ. ಪಾಂಡ್ಯರಾಜ ಬಲ್ಲಾಳ ಪದವಿ ಪೂರ್ವ ಕಾಲೇಜು ತಂಡ ಪ್ರಥಮ ಪ್ರಶಸ್ತಿ ಪಡೆದಿದೆ.
Published on

ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಪದವಿ ಪೂರ್ವ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಉಳ್ಳಾಲದ ಕೆ. ಪಾಂಡ್ಯರಾಜ ಬಲ್ಲಾಳ ಪದವಿ ಪೂರ್ವ ಕಾಲೇಜು ತಂಡ ಪ್ರಥಮ ಪ್ರಶಸ್ತಿ ಪಡೆದಿದೆ.
ವಿಜೇತ ಕೆ. ಪಾಂಡ್ಯರಾಜ ಬಲ್ಲಾಳ ಪದವಿ ಪೂರ್ವ ಕಾಲೇಜು ತಂಡ ಅಕ್ಟೋಬರ್ 16 ಮತ್ತು 17 ರಂದು ಬಾಗಲಕೋಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಈ ತಂಡವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ ಸಂಘಟಿಸಿದ ಉಳ್ಳಾಲ ತಾಲೂಕು ಮಟ್ಟದ ದಸರಾ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಪ್ರಶಸ್ತಿ ಪಡೆದಿತ್ತು.
ವಿಜೇತ ತಂಡದ ವಿದ್ಯಾರ್ಥಿಗಳಿಗೆ ಯು.ಎಮ್ ತಮೀಮ್ ಅವರು ತರಬೇತುದಾರರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net