

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿಯಾಗಿ ನಿರ್ಮಿಸುತ್ತಿರುವ ಕೆ.ಆರ್.ಪುರ ಲೂಪ್‌ಅನ್ನು ಆ.15ರೊಳಗೆ ಸಾರ್ವಜನಿಕರ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮುಕ್ತಾಯ ಹಂತದಲ್ಲಿರುವ ಲೂಪ್ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಡಿಸಿಎಂ, ಸ್ಥಳೀಯ ಶಾಸಕರೂ ಆದ ಸಚಿವ ಬೈರತಿ ಸುರೇಶ್ ಅವರೊಂದಿಗೆ ಸ್ಕೂಟರ್‌ನಲ್ಲಿ ಸಂಚರಿಸಿದರು. ಕಾಮಗಾರಿ ಉತ್ತಮವಾಗಿ ನಿರ್ಮಾಣ ಮಾಡಲಾಗಿದೆ. ಇನ್ನೂ ಕೆಲ ದಿನ ಪರೀಕ್ಷಾರ್ಥ ಸಂಚಾರ ಮಾಡಬೇಕಿದೆ. ಆ ಬಳಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಹೆಬ್ಬಾಳ ಮೇಲ್ಸೇತುವೆಯ ಬಾಕಿ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಭರವಸೆ ನೀಡಿದ್ದಾರೆ.