ಸ್ವಂತ ಕರ್ಚಿನಲ್ಲಿ ರಸ್ತೆ ಗುಂಡಿ ಮುಚ್ಚಿದ ಕೆ.ಆರ್.ಪುರಂ ಬಿಜೆಪಿ ಕಾರ್ಯಕರ್ತರು.

New Project (1)
Published on

ಬೆಂಗಳೂರು: ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಲ್ಲಿ ಬಸವನಪುರ ಮುಖ್ಯರಸ್ತೆಯಲ್ಲಿದ್ದ ಗುಂಡಿಗಳಿಗೆ ಜಲ್ಲಿ ಸಿಮೆಂಟ್ ಸುರಿದು ಗುಂಡಿಗಳನ್ನು ಮುಚ್ಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಕಾಪ್ರೋರೇಟರ್ ಬಿ.ಎನ್ .ಜಯಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ಬೆಂಗಳೂರು ನಗರದಲ್ಲಿ ರಸ್ತೆಗುಂಡಿಗಳಿಂದಾಗಿ ಸಂಚಾರ ದಟ್ಟಣೆ ಅಧಿಕವಾಗುತ್ತಿರುವುದರ ಜತೆಗೆ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಬ್ರಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಹೇಳಿದ ಸರ್ಕಾರ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಗುಂಡಿಗಳಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕುವ ಸ್ಥಿತಿಗೆ ಸರ್ಕಾರ ಬಂದಿದೆ ಎಂದು ಆರೋಪಿಸಿದರು.

ಬೆಂಗಳೂರು ನಗರದ ಕ್ಷೇತ್ರಗಳಿಗೆ ಅನುದಾನವಿಲ್ಲದೆ ಗುಂಡಿಗಳಾಗಿ ಪರಿವರ್ತನೆಯಾದರೂ ಸರ್ಕಾರ ಮಾತ್ರ ಗಾಢನಿದ್ರೆಯಲ್ಲಿದೆ. ಗುಂಡಿ ಮುಚ್ಚಲಾಗದ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ಗುಂಡಿಗಳಿಂದ ಜನರ ಜೀವಕ್ಕೆ ಸಂಚಕಾರ ಎದುರಾಗಿದೆ. ಸ್ವಂತ ಖರ್ಚಿನ ಮೂಲಕ ಕ್ಷೇತ್ರದಲ್ಲಿ ಬಸವನಪುರದಲ್ಲಿ ಶಾಸಕ ಬೈರತಿ ಬಸವರಾಜ ಅವರ ಸೂಚನೆಯಂತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದೇವೆ ಎಂದು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೆ.ಆರ್.ಪುರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗೇನಹಳ್ಳಿ ಲೋಕೇಶ್,ಶ್ರೀರಾಮುಲು, ಲಕ್ಷ್ಮೀ, ಜಯಂತಿ, ಆಂಜನಿ, ಪ್ರಕಾಶ್, ರವಿಕುಮಾರ್, ಕೌಶಲ್ಯರಾಮ್, ರಾಮಚಂದ್ರಣ್ಣ, ಕೃಷ್ಣಪ್ಪ, ಗೋಪಾಲ, ಕೃಷ್ಣಮೂರ್ತಿ, ಚಂದ್ರಶೇಖರ್ ರೆಡ್ಡಿ, ಲಲಿತಮ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net