

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 226 ಜನ ಗುಣಮುಖರಾಗಿದ್ದು, ಹೊಸದಾಗಿ 262 ಕರೊನಾ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸೋಂಕಿತ ಬುಧವಾರ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 33,443 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿವರೆಗೆ ಒಟ್ಟು 31,286 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 69, ಬಾದಾಮಿ 39, ಜಮಖಂಡಿ 41, ಹುನಗುಂದ 45, ಮುಧೋಳ 59, ಬೀಳಗಿ ತಾಲೂಕಿನಲ್ಲಿ 9 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1941 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು 1875 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.