45 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 93 ಜನ ಗುಣಮುಖರಾಗಿದ್ದು, ಹೊಸದಾಗಿ 45 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೇ 5 ಜನ ಸೋಂಕಿತರು ಮಂಗಳವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 34343 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 32121 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 19, ಬಾದಾಮಿ 3, ಜಮಖಂಡಿ 8, ಹುನಗುಂದ 8, ಮುಧೋಳ 4, ಬೀಳಗಿ ತಾಲೂಕಿನ 3 ಜನರಲ್ಲಿ ಸೋಂಕು ದೃಢಪಟ್ಟಿವೆ.

ಹೊಸದಾಗಿ ಕಲಾದಗಿ, ಬೀಳಗಿ, ಜಮಖಂಡಿ, ಖಾಜಿ ಬೀಳಗಿ ಹಾಗೂ ಬಾದಾಮಿಯಲ್ಲಿ ತಲಾ ಒಬ್ಬರು ಸೇರಿ ಒಟ್ಟು 5 ಜನ ಮೃತಪಟ್ಟಿರುತ್ತಾರೆ. ಇಲ್ಲಿಯವರೆಗೆ ಒಟ್ಟು 294 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 1824 ಮಾತ್ರ ಸಕ್ರಿಯ ಪ್ರಕರಣಗಳು ಇವೆ. 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net