8 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 24 ಜನ ಗುಣಮುಖರಾಗಿದ್ದು, ಹೊಸದಾಗಿ 8 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸೋಂಕಿತ ಶುಕ್ರವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 34,948 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 34,135 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1950 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು 502 ಸಕ್ರಿಯ ಪ್ರಕರಣಗಳು ಇವೆ.

ಹೊಸದಾಗಿ ದೃಢಪಟ್ಟ 8 ಕೋವಿಡ್ ಪ್ರಕರಣಗಳಲ್ಲಿ 3 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 5 ಜನ ಹೋಮ್ ಐಸೋಲೇಷನ್‌ದಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net