13 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 13 ಜನ ಗುಣಮುಖರಾಗಿದ್ದು, ಹೊಸದಾಗಿ 13 ಕೋವಿಡ್ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 13944 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 13727 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬೀಳಗಿ ಮತ್ತು ಹುನಗುಂದ ತಾಲೂಕಿನಲ್ಲಿ ತಲಾ 4, ಮುಧೋಳ 3 ಹಾಗೂ ಜಮಖಂಡಿಯಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 5748 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿವರೆಗೆ ಒಟ್ಟು 461706 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 441450 ನೆಗೆಟಿವ್ ಪ್ರಕರಣ ಹಾಗೂ 135 ಮೃತ ಪ್ರಕರಣ ವರದಿಯಾಗಿರುತ್ತವೆೆ. ಇನ್ನು 81 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net