BJP ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ka pu siddalingaswamy
Published on

ಮೈಸೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ  ನಿಧನರಾಗಿದ್ದಾರೆ.

ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.‌

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net