ಕಬಡ್ಡಿ ಗಂಡುಗಲಿಗಳ ದೇಶೀಯ ಆಟ

09-02
ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಕಬಡ್ಡಿ ಪಂದ್ಯಾವಳಿಯಲ್ಲಿ ಶಾಸಕ ಎಸ್.ಆರ್.ವಿಶ್ವನಾಥ ಅವರನ್ನು ಸನ್ಮಾನಿಸಲಾಯಿತು. ಶಾಸಕ ಧೀರಜ್ ಮುನಿರಾಜು, ಆಯೋಜಕ ಆರ್.ಆನಂದಮೂರ್ತಿ, ಮುಖಂಡರಾದ ದಿಬ್ಬೂರು ಜಯಣ್ಣ, ಅಲೋಕ್ ವಿಶ್ವನಾಥ, ಸತೀಶ್, ಮನು, ಎನ್.ಕೆ ರಮೇಶ್, ವಾಸು ಇತರರು ಇದ್ದರು.
Published on

ರಾಷ್ಟ್ರಮಟ್ಟದ ಪಂದ್ಯ ನಡೆಯುವಂತಾಗಲಿ- ಶಾಸಕ ಎಸ್.ಆರ್ ವಿಶ್ವನಾಥ್ ಬಣ್ಣನೆ

ದೊಡ್ಡಬಳ್ಳಾಪುರ: ಕಬಡ್ಡಿ ಆಟವು ಗಂಡುಗಲಿಗಳ ದೇಶೀಯ ಆಟವಾಗಿದ್ದು, ಆರೋಗ್ಯ ಮತ್ತು ದೈಹಿಕ ಕ್ಷಮತೆ ಹೆಚ್ಚಿಸುತ್ತದೆ ಎಂದು ಶಾಸಕ ಎಸ್.ಆರ್ ವಿಶ್ವನಾಥ ಹೇಳಿದರು.

ಶಾಸಕ ಧೀರಜ್ ಮುನಿರಾಜು ಜನ್ಮದಿನದ ಪ್ರಯುಕ್ತ ನಗರದ ಖಾಸ್ ಬಾಗ್-ದರ್ಗಾಪುರದಲ್ಲಿ ಮೂರು ದಿನ ಹಮ್ಮಿಕೊಂಡಿರುವ ಹೊನಲು ಬೆಳಕಿನ ರಾಜ್ಯಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್-2025 (ಅಂಜನಾದ್ರಿ ಕಪ್ -2025) ಪಂದ್ಯಾವಳಿಗೆ ಸೋಮವಾರ ಸಂಜೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಬಡ್ಡಿ ಆಟವು ಪುರುಷ ಪ್ರಧಾನವಾಗಿತ್ತು. ತಂದೆ-ತಾಯಿಗಳ ಪ್ರೋತ್ಸಾಹದಿಂದ ಕಬಡ್ಡಿ ಆಟದಲ್ಲಿ ಮಹಿಳೆಯರು ಸಕ್ರಿಯರಾಗಿರುವುದು ನೇಪಥ್ಯಕ್ಕೆ ಸರಿಯುವ ಹಂತದಲ್ಲಿದ್ದ ಕಬಡ್ಡಿ ಆಟವು ಮತ್ತೆ ತನ್ನ ವೈಭವವನ್ನು ಉಳಿಸಿಕೊಂಡಿದೆ. ಸೋಲು-ಗೆಲುವು ಲೆಕ್ಕಕ್ಕೆ ಇಟ್ಟುಕೊಳ್ಳದೆ ಕ್ರೀಡೆಯಲ್ಲಿ ಸಕ್ರಿಯರಾಗಬೇಕು. ಕ್ರೀಡಾಸ್ಫೂರ್ತಿ ಮೆರೆಯುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಲಕ್ಷಣ. ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಪಂದ್ಯಾವಳಿ ನಡೆಯುತ್ತಿರುವುದು ಮಾದರಿ ವಿಚಾರ. ಮುಂದೆ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳು ನಡೆಯುವಂತಾಗಲಿ ಎಂದು ಹೇಳಿದರು.

ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಚ್.ಹನುಮಂತರಾಯಪ್ಪ ಮಾತನಾಡಿ, ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವುದರಿಂದ ಕ್ರೀಡಾಪಟು ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಸಾಕಷ್ಟು ಪ್ರೋತ್ಸಾಹ-ನೆರವು ದೊರೆಯುತ್ತಿದೆ. ಇದರಿಂದ ಕ್ರೀಡಾಕ್ಷೇತ್ರವು ಬಲಿಷ್ಠವಾಗಲು ಸಾಧ್ಯವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡಾಪಟುಗಳಿಗೆ ಸಾಕಷ್ಟು ಪ್ರಮಾಣದಲ್ಲಿ ನೆರವು ನೀಡುತ್ತಿದೆ. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಕ್ರೀಡೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಕ್ರೀಡೆಗಳಲ್ಲಿ ಪ್ರತಿಯೊಬ್ಬರು ಸಕ್ರಿಯರಾಗಬೇಕು ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net