ಕೊಡಿಯಾಲಬೈಲು ಶಾಲೆಯಲ್ಲಿ ಕಬಡ್ಡಿ ಪಂದ್ಯಾಟ

New Project (35)
Published on

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ತಾಲೂಕು ಹಾಗೂ ಕಡಿರುದ್ಯಾವರ ಕೊಡಿಯಾಲಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕುಮಟ್ಟದ ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕ- ಬಾಲಕಿಯರ ಕಬಡ್ಡಿ ಪಂದ್ಯಾಟ ಕೊಡಿಯಾಲಬೈಲು ಶಾಲಾ ವಠಾರದಲ್ಲಿ ನಡೆಯಿತು.

ಕೊಡಿಯಾಲಬೈಲು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಘವೇಂದ್ರ ಪಟವರ್ಧನ್ ಅಧ್ಯಕ್ಷತೆ ವಹಿಸಿದ್ದರು. ಕಡಿರುದ್ಯಾವರ ಗ್ರಾಪಂ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ರವಿರಾಜ ಗೌಡ, ರಾಜ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಜಯರಾಜ್ ಜೈನ್, ಗ್ರಾಪಂ ಸದಸ್ಯರಾದ ರಾಜೇಶ್ ಎನ್ಕುಡೆ, ಸೂರಜ್ ವಳಂಬ್ರ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ದನ ಕಾನರ್ಪ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಫಿಲೋಮಿನಾ ಸಿ.ಜೆ. ಸ್ವಾಗತಿಸಿದರು. ಸಹಶಿಕ್ಷಕಿ ಶ್ವೇತಾ ವಿ.ಎಚ್. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net