ಹೊನಲು-ಬೆಳಕಿನ ಕಬಡ್ಡಿ ಪಂದ್ಯಾವಳಿ 19ರಂದು

9 NVL 1
Published on

ನವಲಗುಂದ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಸ್ತುತಪಡಿಸುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವ-2024ರ ಅಂಗವಾಗಿ ಪಟ್ಟಣದ ಶಂಕರ ಮಹಾವಿದ್ಯಾಲಯದ ಆವರಣದಲ್ಲಿ ಜ. 19 ಹಾಗೂ 20ರಂದು ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶಣ್ಮುಖ ಗುರಿಕಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕಬಡ್ಡಿ ಪಂದ್ಯಾವಳಿಯ ಲಾಂಛನ ಬಿಡುಗಡೆಗೊಳಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇಶಿ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರಥಮ ಬಹುಮಾನ 40 ಸಾವಿರ ರೂ., ದ್ವಿತೀಯ 20 ಸಾವಿರ ರೂ., ತೃತೀಯ ಹಾಗೂ ನಾಲ್ಕನೇ ತಂಡಕ್ಕೆ ತಲಾ 10 ಸಾವಿರ ರೂ. ಬಹುಮಾನ ನೀಡಲಾಗುವುದು. 8 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡವನ್ನು ಆಯ್ಕೆ ಮಾಡಿ, ನಂತರ ಜಿಲ್ಲಾ ಮಟ್ಟದ ಪಂದ್ಯದಲ್ಲಿ ಗೆದ್ದ ತಂಡಕ್ಕೆ 1 ಲಕ್ಷ ರೂ. ಬಹುಮಾನ, ಎರಡನೇ ತಂಡಕ್ಕೆ ತಂಡಕ್ಕೆ 60 ಸಾವಿರ ರೂ. ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ತಲಾ 30 ಸಾವಿರ ರೂ. ಬಹುಮಾನ ವಿತರಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಎಸ್.ಬಿ. ದಾನಪ್ಪಗೌಡರ, ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ, ದೇವರಾಜ ದಾಡಿಬಾವಿ, ಮೃತ್ಯುಂಜಯ ಹಿರೇಮಠ, ಆನಂದ ಜಕ್ಕನಗೌಡರ, ಅಪ್ಪಣ್ಣ ಭಾಗಿ, ರಾಜಶೇಖರ ಕಂಪ್ಲಿ, ರಾಯನಗೌಡ ಪಾಟೀಲ, ನಿಂಗಪ್ಪ ಬಾರಕೇರ, ಬಸವರಾಜ ಕಾತರಕಿ, ಮಲ್ಲಿಕಾರ್ಜುನ ಗೌಡ ಸಂಗನಗೌಡರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net