

ಕಡಬ: ಶಾಲಾ ಶಿಕ್ಷಣ ಇಲಾಖೆಯ ಮೈಸೂರು ವಿಭಾಗಮಟ್ಟದ 14ರ ವಯೋಮಾನ ಹಾಗೂ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.27 ಮತ್ತು 28ರಂದು ಶ್ರೀ ರಾಮಕುಂಜೇಶ್ವರ ಪಿಯು ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆಯಲಿದೆ. ಇದರ ಪೂರ್ವಭಾವಿ ಸಭೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ ಜಿ.ಎಸ್. ಮಾತನಾಡಿ, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕ್ರೀಡಾಕೂಟ ಆಯೋಜನೆ ಸಮಿತಿ ಸಂಚಾಲಕ ಕೇಶವ ಅಮೈ ಮಾತನಾಡಿ, ಕಬಡ್ಡಿ ಪಂದ್ಯಾಟದ ಜತೆಗೆ ವಿಜ್ಞಾನ, ಕೃಷಿ, ಆಹಾರ ಮೇಳಗಳು ನಡೆಯಲಿವೆ. ಸೆ.27ರಂದು ರಾತ್ರಿ ಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಬಾಕಿಲ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನೆಕಲ್ಲು, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕರುಣಾಕರ ಮಣಿಯಾಣಿ, ಶ್ರೀ ರಾಮಕುಂಜೇಶ್ವರ ಪಿ.ಯು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬಿ. ಮೊದಲಾದವರಿದ್ದರು. ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ ನಿರೂಪಿಸಿದರು.