ಸರಣಿ ಅಪಘಾತ

WhatsApp Image 2024-05-02 at 21.02.32_52b882d7
Published on


ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಕಬಕದಲ್ಲಿ ರೋಗಿಯನ್ನು ಮಂಗಳೂರಿಗೆ ವರ್ಗಾವಣೆ ಮಾಡುತ್ತಿದ್ದ ಆಂಬುಲೆನ್ಸ್ಗೆ ಕಾರು ಡಿಕ್ಕಿಯಾಗಿದ್ದು, ಅದಕ್ಕೆ ಮಂಗಳೂರು ಭಾಗದಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾಗಿ ಕೆಲ ಕಾಲ ಸಂಚಾರಕ್ಕೆ ಸಮಸ್ಯೆಯಾಯಿತು.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆಂಬುಲೆನ್ಸ್ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು.
ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಆಂಬುಲೆನ್ಸ್ ಎಂದು ಗುರುತಿಸಲಾಗಿದ್ದು, ಮಂಗಳೂರಿಗೆ ರೋಗಿಯೋರ್ವರನ್ನು ಕೊಂಡೊಯ್ಯಲಾಗುತ್ತಿತ್ತು. ಕಬಕದ ಶಾಲಾ ರಸ್ತೆಯಿಂದ ನೇರವಾಗಿ ಮುಖ್ಯರಸ್ತೆಗೆ ಬಂದ ಕಾರು ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಬಂದ ಮತ್ತೊಂದು ಕಾರು ಅಪ್ಪಳಿಸಿದೆ. ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು -ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net