ಭರ್ತಿ ಹಂತ ತಲುಪಿದ ಕಬಿನಿ: ಜು.20ಕ್ಕೆ ಸಿಎಂ ಬಾಗಿನ

karanataka_cm
Published on

ಮೈಸೂರು: ಬಹುತೇಕ ಭರ್ತಿಯಾಗುವ ಹಂತ ತಲುಪಿರುವ ಎಚ್.ಡಿ. ಕೋಟೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆ.11ಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಅತಿಥಿಗಳಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ವಸತಿ ಸಚಿವ ವಿ.ಸೋಮಣ್ಣ, ಶಾಸಕ ಸಿ.ಅನಿಲ್ ಕುಮಾರ್, ಸಂಸದರಾದ ವಿ.ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

ಗರಿಷ್ಠ 2284 ಅಡಿಗಳಷ್ಟು ನೀರಿನ ಸಂಗ್ರಣಾ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2282.43 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2279.82 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 29,768 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 29,844 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net