ಆಗಸ್ಟ್ ಮೊದಲ ವಾರ ಕಾಡಾ ಸಭೆ: ನಾಲೆಗೆ ನೀರು ಬಿಡುವ ದಿನ ನಿಗದಿ

SS Mallikarjun (dvg south)
Published on

ದಾವಣಗೆರೆ: ಆಗಸ್ಟ್ ಮೊದಲ ವಾರ ಕಾಡಾ ಸಮಿತಿ ಸಭೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಸಭೆಯಲ್ಲಿ ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ದೇವರ ಕೃಪೆಯಿಂದ ಸಕಾಲದಲ್ಲಿ ಮಳೆಯಾಗಿ ರೈತರ ಮುಖದಲ್ಲಿ ಮಂದಹಾಸ ಬೀರಿದೆ. ಡ್ಯಾಂನಲ್ಲಿ ಪ್ರಸ್ತುತ 161.6 ಅಡಿ ನೀರಿದ್ದು, ಶೀಘ್ರ ನೀರಾವರಿ ಸಲಹಾ ಸಮಿತಿ ರಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿ ಮುಂಗಾರು ವಿಳಂಬವಾಯಿತಾದರೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿ ಜಲಾಶಯಕ್ಕೆ ಉತ್ತಮ ನೀರು ಹರಿದು ಬಂದಿದೆ. ವಾಡಿಕೆಯಂತೆ ಜಲಾಶಯದಲ್ಲಿ 163 ಅಡಿ ನೀರಿದ್ದರೆ ಮಳೆಗಾಲದಲ್ಲಿ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ.

ಈಗಾಗಲೇ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆರಂಭಗೊಂಡಿದ್ದು, ನೀರಿನ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ಮೊದಲ ವಾರ ಕಾಡಾ ಸಮಿತಿ ಸಭೆ ಕರೆದು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net