ಕುಮಾರಧಾರ ನದಿಗೆ ಹಾರಿ ರಬ್ಬರ್ ಕಟ್ಟಿಂಗ್ ಕಾರ್ಮಿಕ ಆತ್ಮಹತ್ಯೆ?

k1
Published on

ಕಡಬ: ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ನದಿ ಬದಿಯಲ್ಲಿ ಶೂ ಪತ್ತೆಯಾಗಿದೆ. ಶೌರ್ಯ ತಂಡದ ಸದಸ್ಯರಿಂದ ನದಿಯಲ್ಲಿ ಹುಡುಕಾಟ ಪ್ರಕ್ರಿಯೆ ನಡೆದಿದ್ದು, ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net