

ಕಡಬ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶ್ರಿ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಹಯೋಗದೊಂದಿಗೆ 14ರ ವಯೋಮಾನದ ಬಾಲಕ ಬಾಲಕಿಯರ ತಾಲೂಕುಮಟ್ಟದ ಖೋ ಖೋ ಟೂರ್ನಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಗಿರೀಶ್ ಎ.ಪಿ. ಕ್ರೀಡಾಕೂಟ ಉದ್ಘಾಟಿಸಿದರು. ಸಂಸ್ಥೆ ಕಾರ್ಯದರ್ಶಿ ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು.
ರಾಮಕುಂಜ ಗ್ರಾಪಂ ಅಧ್ಯಕ್ಷೆ ಸುಚೇತಾ, ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ., ರಾಮಕುಂಜ ಕ್ಲಸ್ಟರ್ ಸಿ.ಆರ್.ಪಿ.ಮಹೇಶ್ ಎಂ., ಪ್ರಾಥಮಿಕ ಶಾಲಾ ನೋಡಲ್ ಅಧಿಕಾರಿ ಚಂದ್ರಶೇಖರ್ ಶುಭಹಾರೈಸಿದರು. ಕಡಬ ತಾಲೂಕು ಪ್ರೌಢಶಾಲಾ ಸಹಶಿಕ್ಷಕಕರ ಸಂಘ ಅಧ್ಯಕ್ಷ ಶಾಂತಾರಾಮ ಓಡ್ಲ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಬಾಲಕೃಷ್ಣ ಎಂ., ಸಂಸ್ಥೆಯ ಆಡಳಿತ ಅಧಿಕಾರಿ ಆನಂದ್ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಮೊದಲಾದವರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲೋಹಿತಾ ಎ. ಸ್ವಾಗತಿಸಿದರು. ಶಿಕ್ಷಕ ಕಿಶೋರ್ ಕುಮಾರ್ ಬಿ. ನಿರೂಪಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ಯು.ಎನ್. ವಂದಿಸಿದರು.
ಬಾಲಕರ ವಿಭಾಗದದಲ್ಲಿ 9 ತಂಡಗಳು ಭಾಗಿ
14ರ ವಯೋಮಾನದ ಬಾಲಕರ ವಿಭಾಗದದಲ್ಲಿ 9 ತಂಡಗಳು ಭಾಗವಹಿಸಿದ್ದು, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಹಳೆನೇರಿಂಕಿ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆೆ. ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಭಾಗವಹಿಸಿದ್ದು, ಹಳೆನೇರಿಂಕಿ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನವನ್ನು ಹಾಗೂ ಆನಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.