ಸರೋಜಿನಿ ಮಹಿಷಿ ವರದಿಗೆ ಒತ್ತಾಯಿಸಲಿ: ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಒತ್ತಾಯ

Kadamba Sene Press Conference Mandya
Published on

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ನಾಡು, ನುಡಿಯನ್ನು ಕಟ್ಟುವ ಕೆಲಸ ಮಾಡುತ್ತಿಲ್ಲ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಹೇಳಿದರು.

ಇದುವರೆಗೂ ಆಯೋಜನೆಗೊಂಡಿರುವ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳ ಪೈಕಿ ಎಷ್ಟನ್ನು ಕಾರ್ಯತಗಗೊಳಿಸಿದೆ ಎಂಬುದು ಪರಿಶೀಲಿಸಿದರೆ ಸಾಹಿತ್ಯ ಪರಿಷತ್ ಕನ್ನಡದ ಅಸ್ಮಿತೆಗೆ ನೀಡಿದ ಕೊಡುಗೆ ಕಾಣಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಯ ಮೂಲಕ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಸರ್ಕಾರವನ್ನು ಸಾಹಿತ್ಯ ಪರಿಷತ್ ಆಗ್ರಹಿಸಬೇಕು. ಕನ್ನಡ ಸಂಬಂಧಿತ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಬೇಕು. ಸಾರ್ವಜನಿಕ ಸಂಪರ್ಕ ಕ್ಷೇತ್ರಗಳಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ವೈದ್ಯಕೀಯ ಕಾಲೇಜಿನಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ದೊರಕಬೇಕು. ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸೌಲಭ್ಯ ನೀಡುವುದರ ಜತೆಗೆ ಐದು ಕಿ.ಮೀ ಸುತ್ತಲ ವ್ಯಾಪ್ತಿಯಲ್ಲಿ ಖಾಸಗಿ ಶಾಲೆ ತೆರೆಯದಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸೈನ್ಯದ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯ ಆರಾಧ್ಯ ಗುಡಿಗೇನಹಳ್ಳಿ, ಜಿಲ್ಲಾ ಉಪಾಧ್ಯಕ್ಷ ರಾಮು ಚಿಕ್ಕಗೌಡನದೊಡ್ಡಿ, ಜಿಲ್ಲಾ ಸಂಚಾಲಕ ಸಲ್ಮಾನ್, ಕದಸಂಸ ಜಿಲ್ಲಾ ಸಂಚಾಲಕ ಉಮೇಶ್ ಉಮ್ಮಡಹಳ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net