

ಮಂಡ್ಯ: ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ಕದಂಬ ಸೈನ್ಯ ಸಂಘಟನೆಯ ವತಿಯಿಂದ ಕುವೆಂಪು ಅವರ ಭಾವಗೀತೆಗಳ ಗಾಯನ ಸ್ಪರ್ಧೆ ಮತ್ತು ಕದಂಬ ಕುವೆಂಪು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಫೆ.8ರ ಬೆಳಗ್ಗೆ 10 ಗಂಟೆಗೆ ನಗರದ ಡಾ.ಹರ್ಡಿಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.
ಗಾಯನ ಸ್ಪರ್ಧೆಯಲ್ಲಿ ಕುವೆಂಪು ಅವರು ರಚಿತ ಗೀತೆಗಳನ್ನು ಮಾತ್ರ ಹಾಡಬೇಕು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ 2 ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಭಾಗವಹಿಸಿದ ಎಲ್ಲರಿಗೂ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಇದೇ ಸಂದರ್ಭದಲ್ಲಿ ಕಂದಬ ಕುವೆಂಪು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯಲ್ಲಿ ಯಶಸ್ವಿಯಾಗಿ ನೆರವೇರಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚು ವೆಚ್ಚಗಳ ವಿವರವನ್ನು ಕಸಾಪ ಅಧ್ಯಕ್ಷ ಮಹೇಶ ಜೋಶಿ ಸಾರ್ವಜನಿಕವಾಗಿ ನೀಡಬೇಕು. ಇಲ್ಲವಾದಲ್ಲಿ ಸಮ್ಮೇಳನದ ಹೆಸರಿನಲ್ಲಿ ಹಣದ ಲೂಟಿ ಮಾಡಿರುವ ಆರೋಪ ಎದುರಿಸಬೇಕಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಮಾಹಿತಿ ನೀಡಲು ಮಹೇಶ್ ಜೋಶಿ ಹಾಗೂ ಜಿಲ್ಲಾಧಿಕಾರಿಗೆ ಸೂಚನೆ ನೀಡುವಂತೆ ಒತ್ತಾಯಿಸಿದರು.
ರಾಜ್ಯ ಸಹ ಸಂಚಾಲಕ ಉಮ್ಮಡಹಳ್ಳಿ ನಾಗೇಶ್, ಜಿಲ್ಲಾ ಸಂಚಾಲಕ ಸಲ್ಮಾನ್, ಜೋಸೆಫ್ ರಾಮು ಇದ್ದರು.