ಕಾದಂಬರಿ ಪ್ರಶಸ್ತಿ ಪ್ರಕಟ

New Project (30)
Published on

ಬೆಂಗಳೂರು: ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ನೀಡುವ 2024ನೇ ಸಾಲಿನ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ತುಂಬಾಡಿ ರಾಮಯ್ಯ ಅವರ ಜಾಲ್ಗರಿ’ ಮತ್ತು ಗುರುಪ್ರಸಾದ್ ಕಂಟಲಗೆರೆ ಅವರ ‘ಆಟ್ರಾಸಿಟಿ’ ಕಾದಂಬರಿಗಳು ಆಯ್ಕೆಯಾಗಿವೆ. ಪ್ರಶಸ್ತಿಯು 25 ಸಾವಿರ ನಗದು (ಇಬ್ಬರಿಗೂ ಸೇರಿ) ಮತ್ತು ಪ್ರಶಸ್ತಿ ಲಕ ಒಳಗೊಂಡಿದೆ. ದ್ವಾರನಕುಂಟೆ ಪಾತಣ್ಣ ಅವರ ಜನ್ಮದಿನವಾದ ಮಾ. 14ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರ ಕಾಲೇಜು ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶೇಷಾದ್ರಿಪುರ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಇತರರು ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ. ಹನ್ೀ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net