ಕದಂಬೋತ್ಸವದಲ್ಲಿ ಮೇಳೈಸಲಿದೆ ಸ್ಥಳೀಯ ಕಲಾ ವೈಭವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

DC-Gangubayi
Published on


ಕಾರವಾರ: ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದ ಅಂಗವಾಗಿ
ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ
ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಕದಂಬೋತ್ಸವದ ಪ್ರಯುಕ್ತ ನಡೆಯುವ ಕದಂಬ ಜ್ಯೋತಿಯ ಮೆರವಣಿಗೆ ಸೇರಿದಂತೆ ಮಾರ್ಚ್ 5 ಮತ್ತು 6 ರಂದು ನಡೆಯುವ
ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯ ಜಿಲ್ಲೆಯ ಕಲಾವಿದರು ಮತ್ತು ಕಲಾತಂಡಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು
ಅವಕಾಶಗಳನ್ನು ನೀಡುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕುರಿತಂತೆ ಈಗಾಗಲೇ ಕಲಾವಿದರು ಮತ್ತು ಕಲಾತಂಡಗಳಿAದ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು,
ತಂಡಗಳನ್ನು ಆಯ್ಕೆ ಮಾಡಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ
ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net