ಕಡೇಶಿವಾಲಯ ಕ್ಲಸ್ಟರ್ ಪ್ರತಿಭಾ ಕಾರಂಜಿ

Btw_Kadeshivalaya
Published on

ಬಂಟ್ವಾಳ: ಕಡೇಶಿವಾಲಯ ಸಂಪನ್ಮೂಲ ಕೇಂದ್ರದ ವತಿಯಿಂದ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು, ಕಡೆಶೀವಾಲಯ ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ನಡೆಯಿತು.

ಕಡೆಶೀವಾಲಯ ಗ್ರಾಪಂ ಅಧ್ಯಕ್ಷೆ ಭಾರತಿ ಎಸ್.ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಹರಿಶ್ಚಂದ್ರ ಎಂ.ಅಧ್ಯಕ್ಷತೆ ವಹಿಸಿದರು.
ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ.ಬಾಯಾರು, ಕಡೇಶಿವಾಲಯ ಶಾಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮಾಧವ ರೈ ಭಂಡಸಾಲೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುರೇಶ್ ಕನ್ನೊಟ್ಟು, ನಿವೃತ್ತ ಮುಖ್ಯಶಿಕ್ಷಕ ಸರಸ್ವತಿ ಕಾರಂತ, ಶಿವರಾಮ ಭಟ್ ನೆಡ್ಲೆ, ಭವಾನಿ ಗಿರಿಯಪ್ಪ ಗೌಡ, ಜಿಲ್ಲಾ ಚಿತ್ರಕಲಾ ಶಿಕ್ಷಕ ಸಂಘದ ಚೆನ್ನ ಕೇಶವ ಪೆರ್ನೆ, ಗಣ್ಯರಾದ ಬಿ.ಕಿಟ್ಟಣ್ಣ ಶೆಟ್ಟಿ ಕುರುಂಬ್ಲಾಜೆ, ಗಣೇಶ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಬಾಬು ಪೂಜಾರಿ ಕೆ. ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ ಭಟ್ ಪ್ರಸ್ತಾಪಿಸಿದರು. ಶಿಕ್ಷಕಿ ದಿವ್ಯಾ ವಂದಿಸಿದರು. ಸಹ ಶಿಕ್ಷಕಿ ಪ್ರೇಮ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net