ಬಾಲಕೃಷ್ಣ ಮಣಿಯಾಣಿ ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

mng-29nov- balakrishna maniyani
Published on


ಮಂಗಳೂರು: ಪಾವಂಜೆ ಮೇಳದ ಪ್ರಧಾನ ಹಾಸ್ಯಗಾರ ಮವ್ವಾರು ಬಾಲಕೃಷ್ಣ ಮಣಿಯಾಣಿ ಅವರು ಕದ್ರಿ ಯಕ್ಷ ಬಳಗದ ವತಿಯಿಂದ ನೀಡಲಾಗುವ ಕದ್ರಿ ಕಂಬಳ ಗುತ್ತು ಕೀರ್ತಿಶೇಷ ಬಾಲಕೃಷ್ಣ ಶೆಟ್ಟಿ ಸ್ಮತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 4 ದಶಕದಿಂದ ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಕಾಶೀ ಮಾಣಿ, ಕುಚೇಲ,ಬಾಹುಕ, ಪಾಪಣ್ಣ, ವಿಜಯ, ಮಾಲಿನಿ ದೂತ ಮುಂತಾದ ಪಾತ್ರಗಳಿಂದ ಪ್ರಸಿದ್ಧರಾಗಿರುವ ಮವ್ವಾರು ಅವರು ಕಟೀಲು, ಆದಿ ಸುಬ್ರಮಣ್ಯ, ಪುತ್ತೂರು, ಕಾಂತಾವರ, ಮಧೂರು, ಕದ್ರಿ, ಮಂಗಳಾದೇವಿ, ಎಡನೀರು ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ.
ಡಿ.2ರಂದು ಕದ್ರಿ ದೇವಸ್ಥಾನದ ರಾಜಾಂಗಣ ನಡೆಯಲಿರುವ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net