

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ ಇದರ 15ನೇ ವಾರ್ಷಿಕ ಸಂಭ್ರಮ ಮಲ್ಲಿಕಟ್ಟೆ ಲಯನ್ಸ್ ಕ್ಲಬ್‌ನಲ್ಲಿ ಜರಗಿತು. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಜಯಾನಂದ ಅಂಚನ್
ದೀಪ ಪ್ರಜ್ವಲನೆಗೊಳಿಸಿದರು.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., , ಕ್ಯಾ. ಬ್ರಿಜೇಶ್ ಚೌಟ, ಕಾರ್ಪೋರೇಟರ್ ಮನೋಹರ್ ಶೆಟ್ಟಿ, ಕದ್ರಿ ಶ್ರೀ ಕೃಷ್ಣ ಜನ್ಮ ಮಹೋತ್ಸವ ಸಮಿತಿಯ ಅಧ್ಯಕ್ಷ ಗೋಕುಲ್ ಕದ್ರಿ, ತುಳು ಸಾಹಿತ್ಯ ಅಕಡೆಮಿ ಮಾಜಿ ಸದಸ್ಯ ಮೋಹನ್ ಕೊಪ್ಪಳ, ಲಯನ್ಸ್ ಕ್ಲಬ್ ಕಾವೇರಿ ಅಧ್ಯಕ್ಷೆ ಉಷಾ ಪ್ರಭಾಕರ್, ಸಂಘದ ಗೌರವಾಧ್ಯಕ ರಾಘವ ಕೆ. , ಅಧ್ಯಕ್ಷ ರಾಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ನಿರಂಜನ್ ಕೆ. ಸಾಲಿಯಾನ್ ಉಪಸ್ಥಿತರಿದ್ದರು. ಇದೇ ಸಂದರ್ಭ ನಟಿ ಸಪ್ತಾ ಪಾವೂರು ಇವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರಿಂದ ತ್ರಿಪುರಾರಿ ಶಂಭೋ ಶಂಕರ ಹರ ಹರ ಮಹಾದೇವ ರೂಪಕ ಪ್ರದರ್ಶನಗೊಂಡಿತು.