ಕದ್ರಿ ಕ್ಷೇತ್ರದಲ್ಲಿ ವೈಭವದ ರಥೋತ್ಸವ

mng-jan22-kadri11
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದ ರಥೋತ್ಸವ ಸೋಮವಾರ ನೆರವೇರಿತು. ಚಿತ್ರ: ಸಂದೇಶ ಜಾರ
Published on

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದ ರಥೋತ್ಸವ ಸೋಮವಾರ ನೆರವೇರಿತು.
ಬೆಳಗ್ಗಿನಿಂದಲೇ ಕ್ಷೇತ್ರದಲ್ಲಿ ಭಕ್ತರ ದಂಡು ಹೆಚ್ಚಾಗಿದ್ದು, ದೇವರ ದರ್ಶನ ಪಡೆದು ಕೃತಾರ್ಥರಾದರು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಬಳಿಕ ರಥಾರೋಹಣ, ಸಾಯಂಕಾಲ ಮನ್ಮಹಾರಥೋತ್ಸವ, ಬೆಳ್ಳಿ ರಥೋತ್ಸವ, ಚಂದ್ರಮಂಡಲ ಉತ್ಸವ ಜರುಗಿತು.
ಜ.23 ರಂದು ಬೆಳಗ್ಗೆ ಅವಭೃತಸ್ನಾನ, ರಾತ್ರಿ ಉತ್ಸವ ಬಲಿ, ಚಂದ್ರಮಂಡಲ ಉತ್ಸವ ಜರುಗಲಿದ್ದು, ಜ.25 ರಂದು ರಾತ್ರಿ ಶ್ರೀ ಮಲರಾಯ ಹಾಗೂ ಪರಿವಾರ ದೈವಗಳ ನೇಮ ಜರುಗಲಿದೆ.
ಕ್ಷೇತ್ರದ ವಾರ್ಷಿಕ ಉತ್ಸವದ ಜತೆಗೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಅಧಿಕವಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net