ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಲು ಕಾಗೇರಿ ಮನವಿ

SRS Kageri
Published on

ಶಿರಸಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ನಡೆಸಿ, ಸಾರ್ವಜನಿಕರ ಸೇವೆಗೆ ಒದಗಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಸಚಿವರನ್ನು ಮಂಗಳವಾರ ಭೇಟಿಯಾದ ಕಾಗೇರಿ, ಜಿಲ್ಲೆಯ ರಸ್ತೆಯ ಸ್ಥಿತಿ ಗತಿ ಬಗ್ಗೆ ವಿವರಿಸಿದರು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗಡಿಯಿಂದ ಕಾರವಾರದ ಗಡಿಯವರೆಗೆ ಚತುಷ್ಪಥ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾಗರ ಮಾಲಾ ಯೋಜನೆಯಡಿ ಮಂಜೂರಾದ ಶಿರಸಿ-ಕುಮಟಾ, ಶಿರಸಿ-ಹಾನಗಲ್ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸುವುದು ಮತ್ತು ಮಳೆಗಾಲದಲ್ಲಿ ರಸ್ತೆ ನಿರ್ವಹಣೆ ಕುರಿತು ಚರ್ಚಿಸಿ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಗಡ್ಕರಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net