

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರು ಬೃಹತ್ ಮೆರವಣಿಗೆ ನಡೆಸುವ ಮೂಲಕ ಮಂಗಳವಾರ ನಾಮಪತ್ರ ಸಲ್ಲಿಸಿದರು.
ನಗರದ ವಿವಿಧ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದ ವಿನೋದ ಅಸೂಟಿ, ಶಿವಾಜಿ ವೃತ್ತದಲ್ಲಿನ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ತೆರದ ವಾಹನದಲ್ಲಿ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮೆರವಣಿಗೆ ಪ್ರಾರಂಭಿಸಿದರು.
ರೀಗಲ್ ವೃತ್ತ, ಸಿಬಿಟಿ, ಅಂಜುಮನ್ ವೃತ್ತ, ಆರದ್ ಪಾರ್ಕ್, ಜ್ಯುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ದಿವ್ಯ ಪ್ರಭು ಅವರಿಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಮುಖಂಡರಾದ ವಿಜಯ ಕುಲಕಣಿರ್, ಕುಸುಮಾವತಿ ಶಿವಳ್ಳಿ, ಅಲ್ತಾ್ ಹಳ್ಳೂರ, ಅನಿಲಕುಮಾರ ಪಾಟೀಲ, ಇಸ್ಮಾಯಿಲ್ ತಮಟಗಾರ, ಎ.ಎಂ. ಹಿಂಡಸಗೇರಿ, ರಾಜಶೇಖರ ಮೆಣಸಿನಕಾಯಿ, ರಜತ ಉಳ್ಳಾಗಡ್ಡಿಮಠ, ಬಸವರಾಜ ಗುರಿಕಾರ, ಈಶ್ವರ ಶಿವಳ್ಳಿ, ಎಂ.ಎಸ್. ಅಕ್ಕಿ, ದೀಪಕ ಚಿಂಚೋರೆ, ವಸಂತ ಅರ್ಕಾಚಾರ, ಸೇರಿದಂತೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಇದ್ದರು.