ಕೈಗಾದಲ್ಲಿ ಕೆಲಸ ಮಾಡುವ ಇಂಜಿನಿಯರ್‌ ನಾಪತ್ತೆ

Sayi-Prashant
Published on

ಕಾರವಾರ:ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನಿರ್ವಹಣೆ ಕೆಲಸದ ಹೊರಗುತ್ತಿಗೆ ಪಡೆದ ಇಸಿಐಎಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಂಧ್ರ ಪ್ರದೇಶ ಮೂಲದ ಹಾಲಿ ಮಲ್ಲಾಪುರ ಚರ್ಚ್ವಾಡಾದಲ್ಲಿ ಸಹೋದ್ಯೋಗಿಗಳ ಜತೆ ವಾಸ ಇರುತ್ತಿದ್ದ ಸಾಯಿ ಪ್ರಶಾಂತ(27) ನಾಪತ್ತೆಯಾದ ಇಂಜಿನಿಯರ್. ಜೂನ್ 5 ರಂದು ಯಾರಿಗೂ ಹೇಳದೇ ಕಾಣೆಯಾಗಿದ್ದಾನೆ ಎಂದು ಆತನ ಸಹೋದ್ಯೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇಂಜಿನಿಯರ್ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕಂಪನಿಯ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ವಿಷಯ ಗಂಭೀರವಾಗಿದೆ. ಸೂಕ್ತ ಮಾಹಿತಿ ಪಡೆದು, ಇಂಜಿನಿಯರ್ ಹುಡುಕಾಟ ನಡೆಸಲಾಗುತ್ತಿದೆ. ಆತನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net