ರಾಜ್ಯಮಟ್ಟದ ಪ್ರಶಸ್ತಿಗೆ ಕಾಜೂರು ಶಾಲೆ ಆಯ್ಕೆ

ರಾಜ್ಯಮಟ್ಟದ ಪ್ರಶಸ್ತಿಗೆ ಕಾಜೂರು ಶಾಲೆ ಆಯ್ಕೆ
Published on

ಸೋಮವಾರಪೇಟೆ: ರಾಜ್ಯ ಸರ್ಕಾರದ ಪುಷ್ಠಿಯೋಜನೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಶಾಲಾಭಿವೃದ್ಧಿ ಸಮಿತಿ ರಾಜ್ಯಮಟ್ಟದ ಪ್ರಶಸ್ತಿಗೆ ತಾಲೂಕಿನ ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆ ಭಾಜನವಾಗಿದ್ದು, ರೂ. ಒಂದು ಲಕ್ಷ ನಗದನ್ನು ಪುರಸ್ಕಾರವಾಗಿ ಪಡೆದಿದೆ.

ಶಾಲೆಯಲ್ಲಿ ಇತ್ತೀಚೆಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ರಾಜ್ಯ ಸರ್ಕಾರ ಪುರಸ್ಕಾರವಾಗಿ ನೀಡುವ ಹಣವನ್ನು ಶಾಲೆಯ ಮೂಲ ಸೌಕರ್ಯಕ್ಕೆ ಬಳಸಿಕೊಳ್ಳಬೇಕೆಂದು ನಿರ್ದೇಶನವಿದ್ದು, ಈ ನಿಟ್ಟಿನಲ್ಲಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಹಾಗೂ ಇ ಕಲಿಕೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು. ನಮ್ಮ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಪಾಲಕರು, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಅಧಿಕಾರಿಗಳು ಹಾಗೂ ದಾನಿಗಳು ಸಹಕಾರ ನೀಡಿದ್ದಾರೆ ಎಂದರು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಆಶಾ ಚಂಗಪ್ಪ, ಸದಸ್ಯರು, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ.ಕೆ. ಶ್ರೀಜಿತ್ ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಸರಳಕುಮಾರಿ ಮತ್ತು ಶಿಕ್ಷಕರು ಇದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net