ಕಾಜೂರು ಉರುಸ್ ಉಪನ್ಯಾಸ ಮಾಲಿಕೆ

Bel_Kajuru Urus
Published on

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಶ್ರದ್ಧಾ ಕೇಂದ್ರ ಕಾಜೂರು ಮಖಾಂ ಶರೀಫ್ ಉರುಸ್ ಪ್ರಯುಕ್ತ ಪ್ರತಿದಿನ ರಾತ್ರಿ ನಡೆಯುವ ಪ್ರಖ್ಯಾತ ಧಾರ್ಮಿಕ ವಿದ್ವಾಂಸರ ಪ್ರವಚನ ಕಾರ್ಯಕ್ರಮವನ್ನು ಸಯ್ಯಿದ್ ಕಾಜೂರು ತಂಙಳ್ ಉದ್ಘಾಟಿಸಿದರು.

ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಯಾಸಿರ್ ಸಖಾಫಿ ಅಲ್‌ಅಝ್ಹರಿ ಮಲಪ್ಪುರಂ, ಅಬೂಬಕ್ಕರ್ ಸಿದ್ದೀಕ್ ಜಲಾಲಿ ಕಕ್ಕಿಂಜೆ, ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರು, ಮುಹಮ್ಮದ್ ಇರ್ಷಾದ್ ಸಖಾಫಿ ಅಲ್ ಅಝ್ಹರಿ ಮಲಪ್ಪುರಂ ಪ್ರವಚನ ನಡೆಸಿಕೊಟ್ಟರು.

ಹಾಫಿಳ್ ಸ್ವಾದಿಕ್ ಅಲಿ ಫಾಳಿಲಿ ಗೂಡಲ್ಲೂರು ಮತ್ತು ಸಂಗಡಿಗರಿಂದ ಬುರ್ದಾ ಮಜ್ಲಿಸ್ ನಡೆಯಿತು. ಸಯ್ಯಿದರುಗಳಾದ ಇಸ್ಮಾಯಿಲ್ ತಂಙಳ್ ಉಜಿರೆ, ಮುಖ್ತಾರ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಕೇರಳ, ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಖಾಝಿ ಎ.ಪಿ.ಉಸ್ತಾದ್ ಮತ್ತು ಗೌರವಾಧ್ಯಕ್ಷ ಕುಂಬೋಳ್ ತಂಙಳ್, ಉರುಸ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಫ್ ಜಿಲ್ಲಾ ಸಮಿತಿ ಸದಸ್ಯ ಜೆ.ಎಚ್.ಅಬೂಬಕ್ಕರ್ ಸಿದ್ದೀಕ್ ಕಾಜೂರು, ಕೋಶಾಧಿಕಾರಿ ಕೆ.ಎಂ.ಕಮಾಲ್ ಕಾಜೂರು, ಜತೆಕಾರ್ಯದರ್ಶಿ ಶಾಹುಲ್ ಹಮೀದ್ ಕಿಲ್ಲೂರು, ಕಾಜೂರು ಆಡಳಿತ ಸಮಿತಿ ಉಪಾಧ್ಯಕ್ಷ ಬದ್ರುದ್ದೀನ್ ಕಾಜೂರು, ಕಿಲ್ಲೂರು ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ ಹಾಗೂ ಕಾಜೂರಿನ ಎಲ್ಲ ಪೂರ್ವಾಧ್ಯಕ್ಷರು ಭಾಗವಹಿಸಿದ್ದರು.

ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಂಟಿ ಉರುಸ್ ಸಮಿತಿ ಪದಾಧಿಕಾರಿಗಳು, ಅಧೀನ ಮಸ್ಜಿದ್ ಮತ್ತು ಮದರಸಗಳ ಧರ್ಮಗುರುಗಳು ಸಹಕಾರ ನೀಡುತ್ತಿದ್ದಾರೆ. ಪ್ರತಿ ದಿನ ಆರ್‌ಡಿಸಿ ವತಿಯಿಂದ ದಫ್ಫ್ ಕಾರ್ಯಕ್ರಮ ನಡೆಯುತ್ತಿದೆ.

ಫೆ.2ರಂದು ಮಹಾಸಂಭ್ರಮ ಸಮಾರೋಪ

ಫೆ.2ರಂದು ಉರುಸ್ ಮಹಾಸಂಭ್ರಮದ ಸಮಾರೋಪ ಮತ್ತು ಮಹಾಅನ್ನದಾನ ನಡೆಯಲಿದೆ. ಸ್ಪೀಕರ್ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಯ್ಯಿದ್ ಕುಂಬೋಳ್ ತಂಙಳ್, ಶಿಹಾಬುದ್ದೀನ್ ಮುತ್ತನ್ನೂರು ತಂಙಳ್, ವಕ್ಫ್ ಮಾಜಿ ಅಧ್ಯಕ್ಷ ಶಾಫಿ ಸಅದಿ, ಅಬ್ದುಲ್ ಅಝೀಝ್ ದಾರಿಮಿ, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಳ್ಳಾಲ ಅಧ್ಯಕ್ಷ ಹನೀಫ್ ಹಾಜಿ ಮೊದಲಾದವರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net