ಕಕ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ

12-DVD-4
ದೇವದುರ್ಗದ ತಾಲೂಕು ಆಡಳಿತಸೌಧದಲ್ಲಿ ಗುರುವಾರ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಕಕ ಉತ್ಸವದ ಪೂರ್ವಭಾವಿ ಸಭೆ ನಡೆಯಿತು. ಶಿರಸ್ತೇದಾರ್ ಭೀಮರಾಯ ಮೇಟಿ, ಬಿಇಒ ಕೆ.ಮಹಾದೇವಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಮಂಜುಳಾ ಇದ್ದರು.
Published on

ದೇವದುರ್ಗ: ಕಲ್ಯಾಣ ಕರ್ನಾಟಕ ಉತ್ಸವವನ್ನು ಸೆ.17ರಂದು ಎಲ್ಲ ಇಲಾಖೆ ಅಧಿಕಾರಿಗಳು ಶಿಷ್ಟಾಚಾರದಂತೆ ಧ್ವಜಾರೋಹಣ ಹಾಗೂ ಅಚ್ಚುಕಟ್ಟಾಗಿ ಕಾರ್ಯಕ್ರಮ ವ್ಯವಸ್ಥೆ ಮಾಡಬೇಕು ಎಂದು ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಸೂಚಿಸಿದರು.

ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂದು ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ನಂತರ ನಿಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ತಾಲೂಕು ಆಡಳಿತದಿಂದ ಆಯೋಜಿಸುವ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಧ್ವಜಾರೋಹಣ ಸಂದರ್ಭದಲ್ಲಿ ಧ್ವಜಕಟ್ಟೆ ಮೇಲೆ ಶಿಷ್ಟಾಚಾರ ಪಾಲನೆ ಮಾಡಬೇಕು. ಕಾರ್ಯಕ್ರಮದಲ್ಲಿ ಸಂಘ ಸಂಸ್ಥೆ ಮುಖಂಡರಿಗೆ ಆಹ್ವಾನಿಸಿ ಎಲ್ಲರೂ ಗುರುತಿನ ಚೀಟಿ ಧರಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪುರಸಭೆ ಸ್ವಚ್ಛತೆ ಕಾಪಾಡಬೇಕು. ಮಹನೀಯರ ಪ್ರತಿಮೆ ಹಾಗೂ ಇಲಾಖೆ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

ನಂತರ ವಿವಿಧ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮದ ಜವಾಬ್ದಾರಿ ವಹಿಸಲಾಯಿತು. ಸಂಘ ಸಂಸ್ಥೆ ಮುಖಂಡರು ಕಾರ್ಯಕ್ರಮದ ಬಗ್ಗೆ ಸಲಹೆ ನೀಡಿದರು. ಶಿರಸ್ತೇದಾರ್ ಭೀಮರಾಯ ಮೇಟಿ, ಬಿಇಒ ಕೆ.ಮಹಾದೇವಯ್ಯ, ಕೃಷಿ ಇಲಾಖೆ ಎಡಿ ಶ್ರೀನಿವಾಸ್ ನಾಯಕ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಮಂಜುಳಾ, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net