ಆ.೨ ರಂದು ಕಕ್ಕಡ-೧೮ ಆಚರಣೆ

N.U.NACHAPPA
Published on

ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ೩೦ನೇ ವರ್ಷದ ಕಕ್ಕಡ-೧೮ ಆಚರಣೆ ಆ.೨ ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮದ ಆರಂಭದಲ್ಲಿ ಕೊಡವ ಗುರುಕಾರೋಣರನ್ನು ಸ್ಮರಿಸಿ ಪ್ರಾರ್ಥಿಸಲಾಗುವುದು ಮತ್ತು ಕಕ್ಕಡ-೧೮ ರ ವಿಶೇಷ ಖಾದ್ಯಗಳನ್ನು ಅರ್ಪಿಸಲಾಗುವುದು. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿಮಸಂಜಾತ ಕೊಡವರು ಆರಾಧಿಸುವ ಪ್ರಕೃತಿ ಸಿರಿಯ ಕೊಡವ ಮಾತೃಭೂಮಿಯನ್ನು ಉಳಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊಡವ ಪೂರ್ವಜರು ಕೊಡವ ಭೂಮಿಯಲ್ಲಿ ದೊರೆಯುವ ಪ್ರಾಕೃತಿಕ ಗಿಡಮೂಲಿಕೆಗಳ ಸತ್ವ ಮತ್ತು ಆರೋಗ್ಯವರ್ಧಕ ಶಕ್ತಿಯ ಪರಿಚಯವನ್ನು ಈ ಸಮಾಜಕ್ಕೆ ಬಳುವಳಿಯಾಗಿ ನೀಡಿ ಹೋಗಿದ್ದಾರೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಸಿಎನ್‌ಸಿ ಸಂಘಟನೆ ನಡೆಸುತ್ತಿರುವ ಸಾರ್ವತ್ರಿಕ ಕಕ್ಕಡ-೧೮ ಆಚರಣೆಯಲ್ಲಿ ಸರ್ವ ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net