ಕಲಾ ಸುಜಯ-ದಶಕ ಸಂಭ್ರಮ

kala sujay
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಮೇ 28ರಂದು ಸಂಜೆ 5.30ಕ್ಕೆ ಕಲಾ ಸುಜಯ-ದಶಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಸುಜಯ ಶಾನಭಾಗ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಾ ಸುಜಯ ಸಂಸ್ಥೆ 10ನೇ ವರ್ಷಕ್ಕೆ ಕಾಲಿರಿಸಿದೆ. ಈ ಹಿನ್ನೆಲೆ ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದೇವೆ. ಅದರ ಉದ್ಘಾಟನೆಯನ್ನು ಮೇ 28ರಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ನೆರವೇರಿಸುವರು. ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಂಘದ ಅಧ್ಯಕ್ಷ ಅನಂತ ಐತಾಳ್, ಸಾಹಿತ್ಯ ಪ್ರಕಾಶನದ ಪ್ರಕಾಶಕ ಎಂ.ಎಂ. ಸುಬ್ರಮಣ್ಯ, ಸ್ವರ್ಣ ಜುವೆಲರ್ಸ್​ನ ಗುಜ್ಜಾಡಿ ಗೋಪಾಲಕೃಷ್ಣ ನಾಯಕ ಹಾಗೂ ಬಾಲ ಕಲ್ಯಾಣ ಕೇಂದ್ರದ ಅಧ್ಯಕ್ಷೆ ಕಮಲಾ ಜೋಶಿ ಪಾಲ್ಗೊಳ್ಳುವರು ಎಂದರು.

ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಡಾ. ವಸುಂಧರಾ ದೊರೆಸ್ವಾಮಿ ಕ್ಷಾತ್ರ ದ್ರೌಪದಿ ಎಂಬ ಏಕವ್ಯಕ್ತಿ ಪ್ರದರ್ಶನ ನೀಡುವರು. ಕಲಾ ಸುಜಯದ 50 ವಿದ್ಯಾರ್ಥಿಗಳು ಶ್ರೀರಾಮನಿಗೆ ನೃತ್ಯ ನಮನ ಸಲ್ಲಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಯವಂತ ಶಾನಭಾಗ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net