ಕಲಶ ಪ್ರತಿಷ್ಠಾಪನಾ ಮಹೋತ್ಸವ ಇಂದು

Published on

ಅರಸೀಕೆರೆ: ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ನಿರ್ವಾಣ ಸಿದ್ದೇಶ್ವರಸ್ವಾಮಿ ದೇಗುಲದ ಪ್ರವೇಶ ಹಾಗೂ ಕಲಶ ಪ್ರತಿಷ್ಠಾಪನಾ ಮಹೋತ್ಸವ ನ.20ರಂದು ಆಯೋಜಿಸಲಾಗಿದೆ.

ಕೆರಗೋಡಿ ರಂಗಾಪುರ ಪೀಠಾಧ್ಯಕ್ಷರಾದ ಶ್ರೀ ಗುರು ಪರದೇಶೀಕೇಂದ್ರ ಸ್ವಾಮೀಜಿ, ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ದೇವಾಲಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net