ಕಲಬುರಗಿ ಜೈಲಿನ ಇಬ್ಬರು ಜೈಲರ್ ಗಳ ಅಮಾನತು

GLB_Central Presion Jail
Published on

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ.

ರಾಜ್ಯಾತಿಥ್ಯ ಪ್ರಕರಣದ ಕುರಿತು ವಿಜಯವಾಣಿ ಸರಣಿ ವರದಿ ಪ್ರಕಟಿಸಿದ ಬೆನ್ನಲೆ ವಿಚಾರ ತೀವ್ರಗೊಳಿಸಿರುವ ಕಾರಾಗೃಹ ಇಲಾಖೆ ಹಿರಿಯ ಅಧಿಕಾರಿಗಳು ಇದೀಗ ಹೈ ಫೈ ಪ್ರಕರಣದ ಹಿನ್ನೆಲೆಯಲ್ಲಿ ಜೈಲರ್ ಗಳಾದ ಶೇಹನಾಜ್, ಪಾಂಡುರಂಗ ಹರವಾಳ ಅವರನ್ನು ಅಮಾನತು ಮಾಡಲಾಗಿದೆ.

ಅಮಾನತು ಮಾಡಿ, ಕಾರಾಗೃಹ ಇಲಾಖೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net