ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವು: ಜಿಮ್ಸ್​ ಆಸ್ಪತ್ರೆಯಲ್ಲಿ ಘಟನೆ, ವೈದ್ಯರ ನಿರ್ಲಕ್ಷ್ಯ ಆರೋಪ

Death
Published on

ಕಲಬುರಗಿ: ತಾಯಿ ಮತ್ತು ನವಜಾತ ಶಿಶು ಮೃತಪಟ್ಟಿರುವ ಘಟನೆ ಕಲಬುರಗಿಯ ಜಿಮ್ಸ್​ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ಕನ್ಯಾಕುಮಾರಿ (23)ಗೆ ಕಳೆದ ರಾತ್ರಿ ಹೆರಿಗೆ ನೋವು ಪ್ರಾರಂಭವಾಗಿತ್ತು. ರಾತ್ರಿ 9 ಗಂಟೆಗೆ ಜಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ಕರೆದುಕೊಂಡು ಬಂದಿದ್ದರು. ರಾತ್ರಿ ಒಂದು ಗಂಟೆ ಸಮಯದಲ್ಲಿ ಹೆರಿಗೆ ನಡೆದಿದ್ದು, ಅದೇ ಸಮಯದಲ್ಲಿ ಮಗು ಮೃತಪಟ್ಟಿದೆ.

ಹೆರಿಗೆ ನಂತರ ಅರ್ಧ ಗಂಟೆಯಲ್ಲಿ ತಾಯಿ ಕೂಡ ಸಾವಿಗೀಡಾಗಿದ್ದಾರೆ. ಹೆರಿಗೆ ನಂತರ ಕನ್ಯಾಕುಮಾರಿ ಹೊಟ್ಟೆ ನೋವು ಅಂದಿದ್ದರು. ಈ ವೇಳೆ ನರ್ಸ್​ಗಳು ಮಾತ್ರೆ ನೀಡಿದ್ದರಂತೆ. ಮಾತ್ರ ಸೇವಿಸಿದ್ದ ಕನ್ಯಾಕುಮಾರಿ, ಕೆಲವೇ ನಿಮಿಷಗಳಲ್ಲಿ ಮೃತಪಟ್ಟಿದ್ದಾರೆ. ತಾಯಿ-ಮಗು ಸಾವಿಗೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net