ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ

CM BSY
Published on

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಅ. 21) ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.

ಬಳ್ಳಾರಿಯ ತೋರಣಗಲ್​ನಿಂದ ಹೆಲಿಕ್ಯಾಪ್ಟರ್​ನಲ್ಲಿ ಹೊರಟ ಸಿಎಂ ಬಿಎಸ್​ವೈ, ಭಾರಿ ಮಳೆಯಿಂದ ಉಂಟಾದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಅಪಾರ ಬೆಳೆ ಹಾನಿ ಸಂಭವಿಸಿದ್ದು, ಅಲ್ಲಲ್ಲಿ ಮನೆ ಕುಸಿತ ಪ್ರಕರಣಗಳು ವರದಿಯಾಗಿವೆ. ಎರಡು ದಿನಗಳ ಹಿಂದಷ್ಟೇ ಕಂದಾಯ ಸಚಿವ ಆರ್​. ಅಶೋಕ್​ ಅವರು ಪ್ರವಾಸ ಮಾಡಿದ್ದರು.

ಇಂದು ಸಿಎಂ ಬಿಎಸ್​ವೈ ವೈಮಾನಿಕ ಸಮೀಕ್ಷೆ ನಡೆಸಿದ್ದು, ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net