ವಿಚಾರಣೆಗೆ ಹಾಜರಾದ ವಾರಿಸ್ ಪಠಾಣ

ಕಅಲಅ
Published on

ಕಲಬುರಗಿ: ಸಿಎಎ, ಎನ್​ಆರ್​ಸಿ ವಿರುದ್ಧ ಕಲಬುರಗಿಯಲ್ಲಿ ಫೆ.15ರಂದು ನಡೆದಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಮಜಲಿಸ್ -ಇ -ಇತೆಹಾದುಲ್ ಮುಸ್ಲಿಮೀನ್ ಪಕ್ಷದ ವಕ್ತಾರ ಹಾಗೂ ಮಾಜಿ ಶಾಸಕ ವಾರಿಸ್ ಯೂಸೂಪ್ ಪಠಾಣ ಕೊನೆಗೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ನಗರದ ಹಾಗರಗಾ ಕ್ರಾಸ್ ಬಳಿಯ ಪೀರ್ ಬಂಗಾಲಿ ಮೈದಾನದಲ್ಲಿ ಫೆ.15ರಂದು ನಡೆದ ತಿದ್ದುಪಡಿ ಪೌರತ್ವ ಕಾಯ್ದೆ, ಎನ್​ಆರ್​ಸಿ ಮತ್ತು ಎನ್​ಪಿಆರ್ ವಿರೋಧಿಸಿ ಎಐಎಂಎಂ ಆಯೋಜಿಸಿದ್ದ ವಿಭಾಗ ಪ್ರತಿಭಟನಾ ರ್ಯಾಲಿಯಲ್ಲಿ ಹಿಂದುಗಳಿಗೆ ಬೆದರಿಕೆ ಹಾಕುವ ಮೂಲಕ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುತ್ತಿದ್ದಾರೆ ಎಂದು ನ್ಯಾಯವಾದಿ ಶ್ವೇತಾಸಿಂಗ್ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮುಂಬೈಗೆ ತೆರಳಿ ನೋಟಿಸ್ ನೀಡಿ ಬಂದಿದ್ದರು. ನಂತರ ಮೂರು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಬಂದಿರಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net