ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಗ್ರಾಮಸ್ಥರು ರಕ್ಷಿಸುವಷ್ಟರಲ್ಲೇ ನಡೆಯಿತು ಘೋರ ದುರಂತ!

sucide dec-1 dec 29
Published on

ಕಲಬುರಗಿ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರದಲ್ಲಿ ನಡೆದಿದೆ.

ಭಾಗ್ಯಮ್ಮ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ದ್ರಾಕ್ಷಾಯಿಣಿ (2 ವರ್ಷ), ಪ್ರೇಮಾ‌ (2 ತಿಂಗಳು) ಮೃತಪಟ್ಟ ಮಕ್ಕಳು. ನಿನ್ನೆ ಮಧ್ಯಾಹ್ನ ಭಾಗ್ಯಮ್ಮ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನ ಕಂಡ ಗ್ರಾಮಸ್ಥರು ಬಾವಿಗೆ ಹಾರಿ ರಕ್ಷಣೆ ಮಾಡುವಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದಾರೆ. ಗ್ರಾಮಸ್ಥರಿಂದ ತಾಯಿ ಭಾಗ್ಯಮ್ಮಳ ರಕ್ಷಣೆ ಮಾಡಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿರುವ ವಿಷಯವನ್ನ ಮುಚ್ಚಿಟ್ಟ ಕುಟುಂಬಸ್ಥರು ಮಕ್ಕಳ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಭಾಗ್ಯಮ್ಮಳನ್ನು ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುವಾಗ ಪೊಲೀಸರಿಗೆ ವಿಷಯ ಗೊತ್ತಾಗಿದೆ. ಈ ಸಂಬಂದ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net