ಶರಣಬಸವೇಶ್ವರ ವಿದ್ಯಾವರ್ಧಕ ಸಂದ ಕಾರ್ಯದರ್ಶಿ ಬಸವರಾಜ ದೇಶಮುಖ ವಿದ್ಯೋತ್ಸವಕ್ಕೆ ಚಾಲನೆ ನೀಡಿದರು. ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರಾದ ಯುವ ಉದ್ಯಮಿ ಚಂದು ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಆರ್.ಆರ್. ಬಿರಾದಾರ್, ವಿವಿಧ ಶಿಣ ಸಂಸ್ಥೆಗಳ ಪ್ರಮುಖರಾದ ನಿತಿನ್ ನಾಯ್ಕ್, ಶಿವಾನಂದ ಖಜೂರಿ ಇದ್ದರು.