ಆಳಂದದಲ್ಲಿ ಬಸವ ಜಯಂತಿ ಪೂರ್ವಭಾವಿ ಸಭೆ ನಾಳೆ

Basav jayanti
Basav jayanti
Published on
ಆಳಂದ: ಕಲಬುರಗಿಯಲ್ಲಿ ಬಸವ ಜಯಂತಿ ನಿಮಿತ್ತ ಏ.19ರಂದು ನಡೆಯಲಿರುವ ಬಸವಾಭಿಮಾನಿಗಳ ಬೃಹತ್ ಸಮಾವೇಶ ಸೇರಿ ವಿವಿಧ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ನಗರದ ವೀರಶೈವ ಲಿಂಗಾಯತ ಭವನದಲ್ಲಿ ಶುಕ್ರವಾರ ಮಧ್ಯಾಹ್ನ 3ಗಂಟೆಗೆ ನಡೆಯಲಿದೆ ಎಂದು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ಶರಣಬಸವಪ್ಪ ಎಸ್.ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷರು, ಶಾಸಕ ಬಿ.ಆರ್.ಪಾಟೀಲ್, ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್ ಅವರು ಸೇರಿದಂತೆ ಜಿಲ್ಲೆಯ ಸಮಾಜದ ಹಿರಿಯ ಮುಖಂಡರು ಭಾಗವಹಿಸಲಿದ್ದು, ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net