ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗೆ ಸ್ಪಂದಿಸಿ

ಕೋಗನೂರ ಗ್ರಾಮಕ್ಕೆ ಜಿಪಂ ಸಿಇಒ ರಾಹುಲ್​ ಸಂಕನೂರ ಮಂಗಳವಾರ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಶಂಕರ ರಾಠೋಡ್​ ಇತರರಿದ್ದರು
ಕೋಗನೂರ ಗ್ರಾಮಕ್ಕೆ ಜಿಪಂ ಸಿಇಒ ರಾಹುಲ್​ ಸಂಕನೂರ ಮಂಗಳವಾರ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಶಂಕರ ರಾಠೋಡ್​ ಇತರರಿದ್ದರು
Published on: 

ಅಫಜಲಪುರ: ತಾಲೂಕವನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದ್ದು, ಜನರಿಗೆ ಕುಡಿವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು, ಶುದ್ಧ ಕುಡಿವ ನೀರು ಒದಗಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್​ ಸಂಕನೂರ ಸೂಚನೆ ನೀಡಿದರು. ಕೋಗನೂರ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಅವರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನರ ಸಮಸ್ಯೆಗೆ ಸ್ಪಂದಿಸಬೇಕು. ವಿಬಿ-ಜಿ ರಾಮ್​ ಜಿ ಅಡಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಮನೆಗಳಿಗೆ ನೀರು ತಲುಪಿಸಬೇಕು. ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ ನಿಗದಿತ ಅವಧಿಯಲ್ಲಿ ಬೆಳೆ ಹಾನಿ ಕುರಿತು ಮಾಹಿತಿ ಸಲ್ಲಿಸಬೇಕು. ಗ್ರಾಪಂಗಳು ಶುಚಿತ್ವ ಕಾಪಾಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದರು. ಭೈರಾಮಡಗಿ ಗ್ರಾಪಂ ವಾಪ್ತಿಯಲ್ಲಿ ವಿಬಿ-ಜಿ ರಾಮ್​ ಜಿ ಟ್ರೇಂಚ್​ ವಕ್​ ಕಾಮಗಾರಿ, ಗುಡೂರ ತಾಂಡಾ, ಗೌಡಗಾಂವ್​ಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಕೊಗನೂರ ಗ್ರಾಮ ಪಂಚಾಯಿತಿಯಲ್ಲಿ ಲೈಬ್ರರಿ ಪರಿಶೀಲಿಸಿದರು. ತಾಪಂ ಇಒ ಶಂಕರ ರಾಠೋಡ್​, ಸಹಾಯಕ ನಿರ್ದೇಶಕ ಶಿವಶಂಕರಯ್ಯ ಸ್ವಾಮಿ, ಪಿಡಿಒಗಳಾದ ಅಂಬಾರಾಯ ಕಟ್ಟಿಮನಿ, ವಿದ್ಯಾರಾಣಿ, ತಾಂತ್ರಿಕ ಸಂಯೋಜಕಿ ಮಾಲಾಶ್ರೀ, ಅಮಿರ, ಪ್ರವಿಣ, ಶೋಭಾ ಕಣಮಸ್ಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net