ಕಲಬುರಗಿ ವಿಭಾಗದ ಪ್ರಗತಿ ಹಾಗೂ ಬರ ಪರಿಸ್ಥಿತಿಯ ಅವಲೋಕನಕ್ಕಾಗಿ ಆಗಮಿಸಿರುವ ಮುಖ್ಯಮಂತ್ರಿಗಳು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಸ್ವತಃ ಎಲ್ಲ ಜಿಲ್ಲೆಗಳ ಪ್ರವಾಸ ಕೈಗೊಂಡು ಜನರ ಹಾಗೂ ಜನಪ್ರತಿನಿಧಿಗಳ ಭೇಟಿ ಮಾಡಿ ಸ್ಥಳೀಯ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ. ಕಲಬುರಗಿ ವಿಭಾಗದ ಉನ್ನತಾಧಿಕಾರಿಗಳ ಸಭೆಯ ಬಳಿಕ, ಮುಂದಿನ ಎರಡು-ಮೂರು ದಿನಗಳಲ್ಲಿ ಬೆಳಗಾವಿ ವಿಭಾಗಕ್ಕೂ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ತಿಳಿಸಿದರು.