ಬೆಳೆ ವಿಮೆ ಬಾಕಿ ₹225 ಕೋಟಿ ಇಂದೇ ಬಿಡುಗಡೆಗೆ ಸಿಎಂ ಆದೇಶ

crop insurence
crop insurence
Published on

ಪ್ರಮುಖ ಮುಖ್ಯಾಂಶಗಳು

  • ವಾರದಲ್ಲಿ ರೈತರ ಖಾತೆಗೆ ಜಮೆ
  • ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಕಲಬುರಗಿ: ರೈತರಿಗೆ ಆಸರೆ: 225 ಕೋಟಿ ಬೆಳೆ ವಿಮೆ ತಕ್ಷಣ ಬಿಡುಗಡೆ: ರಾಜ್ಯದಲ್ಲಿ ವಾಡಿಕೆಗಿಂತ ಶೇ. 34 ರಷ್ಟು ಮಳೆ ಕೊರತೆಯಾಗಿದ್ದು, ಒಟ್ಟು 37 ತಾಲೂಕುಗಳಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಇದೆ. ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಬೆಳೆ ವಿಮೆಯ ಬಾಕಿ ಮೊತ್ತದಲ್ಲಿ ₹225 ಕೋಟಿ ರೂ.ಗಳನ್ನು ಇಂದೇ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದು, ವಾರದಲ್ಲಿ ರೈತರ ಖಾತೆಗೆ ಹಣ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.
ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಧಾಕೃಷ್ಣ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಹಣವು ಮುಂದಿನ ಒಂದು ವಾರದೊಳಗೆ ನೇರವಾಗಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಅವರು ಭರವಸೆ ನೀಡಿದರು. ಒಟ್ಟು ₹585 ಕೋಟಿ ಪರಿಹಾರ ಲೆಕ್ಕಾಚಾರದಲ್ಲಿ ಈಗಾಗಲೇ ₹240 ಕೋಟಿ ನೀಡಲಾಗಿದ್ದು, ಉಳಿದ ಬಾಕಿಯನ್ನೂ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು. ಬೆಳಗಾವಿ ಪ್ರವಾಸದ ಬಳಿಕ ವರದಿ ಪರಿಶೀಲಿಸಿ ಅಧಿಕೃತ ಬರಗಾಲ ಘೋಷಣೆ ಹಾಗೂ ಕೇಂದ್ರಕ್ಕೆ ವರದಿ ಸಲ್ಲಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಕೆಕೆಆರ್‌ಡಿಬಿ ಅಡಿಯಲ್ಲಿ 5,000 ಕೋಟಿ ಅನುದಾನ ನೀಡಲಾಗಿದ್ದು, ಈಗಾಗಲೇ ಶೇ. 80 ರಷ್ಟು ಕೆಲಸ ಮುಗಿದಿದೆ. ಕಾಲಮಿತಿಯೊಳಗೆ ಹಣ ಖರ್ಚು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net