ಸಾಂತ್ವನ ಕೇಂದ್ರಗಳ ಆಯ್ಕೆ ಸಮಿತಿ ಸಭೆ

ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್​ ಅಧ್ಯಕ್ಷತೆಯಲ್ಲಿ ಹೊಸ ತಾಲೂಕು ಸಾಂತ್ವನ ಕೇಂದ್ರಗಳ ಆಯ್ಕೆ ಸಮಿತಿ ಸಭೆ ಗುರುವಾರ ನಡೆಯಿತು. ಪ್ರೀತಿ ದೊಡ್ಡಮನಿ, ರಾಜಕುಮಾರ ರಾಠೋಡ, ಡಾ.ಶರಣಬಸಪ್ಪ ಗಣಜಲಖೇಡ ಇತರರಿದ್ದರು.
ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್​ ಅಧ್ಯಕ್ಷತೆಯಲ್ಲಿ ಹೊಸ ತಾಲೂಕು ಸಾಂತ್ವನ ಕೇಂದ್ರಗಳ ಆಯ್ಕೆ ಸಮಿತಿ ಸಭೆ ಗುರುವಾರ ನಡೆಯಿತು. ಪ್ರೀತಿ ದೊಡ್ಡಮನಿ, ರಾಜಕುಮಾರ ರಾಠೋಡ, ಡಾ.ಶರಣಬಸಪ್ಪ ಗಣಜಲಖೇಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಅಧ್ಯಕ್ಷತೆ
ಕಲಬುರಗಿ: ಜಿಲ್ಲೆಯ ನಾಲ್ಕು ನೂತನ ತಾಲೂಕುಗಳಲ್ಲಿ ಸಾಂತ್ವನ ಕೇಂದ್ರಗಳ ಆಯ್ಕೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಡಿಸಿ ಅಧ್ಯಕ್ಷತೆಯಲ್ಲಿ ನಡೆಯಿತು.
ಕಮಲಾಪೂರ, ಕಾಳಗಿ, ಶಹಾಬಾದ್​ ಹಾಗೂ ಯಡ್ರಾಮಿ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ಪ್ರಾರಂಭಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಒಟ್ಟು 54 ಪ್ರಸ್ತಾವನೆಗಳು ಸ್ವೀಕೃತಗೊಂಡ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ್​ ಮಾಹಿತಿ ನೀಡಿದರು.
ತಾಲೂಕು ಮಟ್ಟದಲ್ಲಿ 7 ಸದಸ್ಯರ ಸಮಿತಿ ರಚಿಸಿದ್ದು, ಅದರಂತೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ, ಸಭೆಯಲ್ಲಿ ತೆಗೆದುಕೊಂಡ ರ್ನಿಣಯಗಳ ನಡುವಳಿಗಳನ್ನು ಸಲ್ಲಿಸಿರುವುದಾಗಿ ಹಾಗೂ ತಾಲೂಕು ಸಮಿತಿಯಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಕೂಡ ಸದಸ್ಯರಿದ್ದು, ಆದರೆ ಅವರ ರುಜು ಇರುವುದಿಲ್ಲ ಎಂದು ಸಭೆಯ ಗಮನಕ್ಕೆ ತರಲಾಯಿತು.
ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್​ ಮಾತನಾಡಿ, ಸಾಂತ್ವನ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರದ ಮಾನದಂಡಗಳ ಪ್ರಕಾರ ಪ್ರಸ್ತಾವನೆ ಪರಿಶೀಲಿಸಿ ಅರ್ಹ ಸಂಸ್ಥೆಗಳನ್ನು ಆಯ್ಕೆಮಾಡಲು ಹಾಗೂ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್​ ಅಧ್ಯಕ್ಷತೆಯ ಉಪ ಸಮಿತಿಯ ಸದಸ್ಯರು ಸ್ವಯಂ ಸೇವಾ ಸಂಸ್ಥೆಗಳಿಗೆ ಭೇಟಿ ನೀಡಿ ಸಂಸ್ಥೆಯಲ್ಲಿನ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಮೂರು ದಿನದೊಳಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದ ಸಮಿತಿಯಲ್ಲಿನ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಅನುಮೋದನೆ ಹಾಗೂ ರುಜು ಪಡೆಯಲು, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಇಲ್ಲದ ಕಡೆಗಳಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಅನುಮೋದನೆ ಪಡೆದು ವರದಿ ಸಲ್ಲಿಸಲು ಸೂಚಿಸಲಾಯಿತು.
ಜಿಲ್ಲೆಯ 9 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ಆಫ್​ಲೈನ್​, ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದ್ದು, ತಾತ್ಕಾಲಿಕ ಮತ್ತು ಅಂತಿಮ ಆಯ್ಕೆಗೆ ಬಾಕಿ ಇರುವ ಅಂಗನವಾಡಿ ಸಹಾಯಕಿಯರ ಆಯ್ಕೆಗೆ ಸಂಬಂಧಿಸಿದಂತೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕಡತದೊಂದಿಗೆ ಮಾಹಿತಿ ಒದಗಿಸಿದ್ದು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಆೇಪಣೆ ಹಾಗೂ ದಾಖಲೆ ಪರಿಶೀಲಿಸಿ ಆಯ್ಕೆಗೆ ಮಾಡಲು ತೀರ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ$್ಮಣ ಶೃಂಗೇರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕಿ ಶಂಕ್ರಮ್ಮ ಢವಳಗಿ, ಜಿಲ್ಲಾ ನಿರೂಪಣಾಧಿಕಾರಿ ಮುರುಗೇಶ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿವಶರಣಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net