ಎಂಎಲ್ಸಿ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರ್ಗೆ ಕಾಂಗ್ರೆಸ್ ಟಿಕೆಟ್
mlc tippannappa kamakanoor
Published on:
Copied
Follow Us
ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೋಲಿ ಸಮಾಜದ ಹಿರಿಯ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದು, ವಿಧಾನಸಭೆಯಿಂದ ಆಯ್ಕೆಯಾಗುವುದು ಖಚಿತವಾಗಿದೆ.
ಈ ಕುರಿತು ರಾಜ್ಯದ ನಾಲ್ಕು ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಹೆಸರುಗಳನ್ನು ಘೋಷಿಸಿದ್ದು, ಅದರಲ್ಲಿ ತಿಪ್ಪಣ್ಣಪ್ಪ ಕಮಕನೂರ ಹೆಸರನ್ನು ಘೋಷಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪ್ರಕಟಣೆ ಹೊರಡಿಸಿದ್ದಾರೆ.
ಕಳೆದ ಎರಡು ಅವಧಿಯಲ್ಲಿ ಪರಿಷತ್ ಅರ್ಧ ಅಧಿಕಾರವಧಿಗೆ ಸದಸ್ಯ ಸ್ಥಾನವನ್ನು ಕಾಂಗ್ರೆಸ್ ನೀಡಿತ್ತು. ಇದೀಗ ಪೂರ್ಣಾವಧಿ ಅಧಿಕಾರದೊಂದಿಗೆ ವಿಧಾನ ಪರಿಷತ್ ಮೆಟ್ಟಿಲ್ಲನ್ನು ತಿಪ್ಪಣ್ಣಪ್ಪ ಕಮಕನೂರ ಏರಲಿದ್ದಾರೆ.
ಪ್ರಬಲ ಕೋಲಿ ಸಮಾಜದ ಮತ್ತು ಹಿಂದುಳಿದ ವರ್ಗಗಳ ನಾಯಕರಾಗಿ, ನೇರ ನುಡಿಗಳ ಮೂಲಕ ಹೆಸರುವಾಸಿಯಾಗಿರುವ ತಿಪ್ಪಣ್ಣಪ್ಪ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ನ ಹಿರಿಯ ನಾಯಕರ ಜತೆ ಉತ್ತಮ ಒಡನಾಟವನ್ನು ಹೊಂದಿದ್ದರು.
ಜೂ.8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದ್ದು, ಅಂದೇ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.11ರಂದು ನಾಮಪತ್ರ ವಾಪಸ್ ಪಡೆಯಲು ಕೊನೇ ದಿನವಾಗಿದ್ದು, ಜು.18ಕ್ಕೆ ಚುನಾವಣೆ ನಡೆಯಲಿದ್ದು, ಗೆಲುವು ನಿಶ್ಚಿತವಾಗಿದೆ.